ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಸಕಲ ಸಿದ್ಧತೆ ನಡೆದಿತ್ತು. ಹೆಲಿಪ್ಯಾಡ್ ಸುತ್ತಲೂ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪೊಲೀಸ್ ಸಿಬ್ಬಂದಿ ಹೆಲಿಪ್ಯಾಡ್ ಅನ್ನು ಸುತ್ತುವರೆದಿದ್ದರು. ಇನ್ನೇನು ಸಿಎಂ ಇದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು, ಅಷ್ಟರಲ್ಲಿ ಎಂಟ್ರಿ ಕೊಟ್ಟ ಗೂಳಿಯೊಂದು ( Bull ) ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣವನ್ನೇ ಸೃಷ್ಟಿ ಮಾಡಿಬಿಟ್ಟಿತು.