ರಾಹುಲ್ ಗಾಂಧಿ ವಿರುದ್ಧ ಬಿತ್ತು ಮತ್ತೊಂದು ಕೇಸ್; ಅಕ್ರಮ ಆಸ್ತಿ ಗಳಿಕೆ ಆರೋಪ ಅರ್ಜಿ ವಿಚಾರಣೆಗೆ ಒಪ್ಪಿದ ಅಲಹಾಬಾದ್ ಹೈಕೋರ್ಟ್ | Rahul Gandhi

ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published on
ಲಖನೌ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಕ್ರಿಮಿನಲ್ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ವಿಚಾರಣೆಗೆ ಒಪ್ಪಿಕೊಂಡಿದೆ.
ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರು, ರಾಹುಲ್ ಗಾಂಧಿ ಮತ್ತು ಅವರ ಕುಟುಂಬದವರು ತಮ್ಮ ಆದಾಯಕ್ಕೆ ಮೀರಿದ ಆಸ್ತಿಯನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದು, ಈ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಅಗತ್ಯವಿದ್ದು, ಸಿಬಿಐ, ಇಡಿ ಅಥವಾ ಇನ್ಯಾವುದೋ ಉನ್ನತ ಸಂಸ್ಥೆಗಳಿಂದ ತನಿಖೆಗೆ ಆದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳಾದ ರಾಜೇಶ್ ಸಿಂಗ್ ಚೌಹಾಣ್ ಮತ್ತು ಜಾಫಿರ್ ಅಹ್ಮದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯನ್ನು ಸ್ವೀಕರಿಸಿದ್ದು, ಶೀಘ್ರದಲ್ಲೇ ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. 
ಗಾಂಧಿ ಕುಟುಂಬದ ಆದಾಯದ ಬಗ್ಗೆ ಕೆಲವು ಸಮಯದಿಂದ ರಾಜಕೀಯ ವಲಯದಲ್ಲಿ ಆರೋಪಗಳು ಕೇಳಿಬರುತ್ತಿವೆ. ನ್ಯಾಯಾಲಯವು ಸಿಬಿಐ ತನಿಖೆಗೆ ಆದೇಶಿಸಿದರೆ, ಅದು ಮತ್ತಷ್ಟು ಕಾನೂನು ಪರಿಶೀಲನೆಗೆ ಕಾರಣವಾಗಬಹುದು. ಹೀಗಾಗಿ ಕಾಂಗ್ರೆಸ್ ನಾಯಕರು ತಮ್ಮ ಘೋಷಿತ ಆದಾಯವನ್ನು ಬೆಂಬಲಿಸುವ ವಿವರಗಳನ್ನು ಪ್ರಸ್ತುತಪಡಿಸುವ ಅಗತ್ಯವಿರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net