

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪ್ರಪ್ರಥಮ ಸ್ವದೇಶಿ ಬ್ಯಾಂಕ್ ಹಾಗೂ ಉಳಿತಾಯ ಖಾತೆ, ಸುರಕ್ಷಾ ಲಾಕರ್ ಸೌಲಭ್ಯ, ಕ್ರೆಡಿಟ್ ಕಾರ್ಡ್‌ಗಳ ಬಳಕೆಯಂತಹ ಯೋಜನೆಗಳನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೊದಲ ಬಾರಿಗೆ ದೇಶದಲ್ಲಿ ಜಾರಿಗೆ ತಂದಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಡಿ.21 ರಂದು 115ನೇ ವರ್ಷಕ್ಕೆ ಪಾದಾರ್ಪಣೆ ಮಾಡಲಿದೆ.
ಸಂಸ್ಥಾಪನಾ ದಿನಾಚರಣೆಯನ್ನು ನಿವೃತ್ತ ಸೆಂಟ್ರಲೈಟ್ಸ್, ಕರ್ನಾಟಕ ವತಿಯಿಂದ ಶೇಷಾದ್ರಿಪುರದ ಹೋಟೆಲ್ ಸಾಮ್ರಾಟ್ ರೆಸಿಡೆನ್ಸಿಯಲ್ಲಿ ಆಯೋಜಿಸಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಮತ್ತು ನಿವೃತ್ತ ಕರ್ನಾಟಕ ಲೋಕಾಯುಕ್ತ ಸಂತೋಷ್ ಹೆಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಾಗೂ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರಾದ ಪಾರ್ಥಸಾರಥಿ ನಾಯ್ಡು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನಿವೃತ್ತ ಸೆಂಟ್ರಲೈಟ್ಸ್ ಪದಾಧಿಕಾರಿಗಳು ತಿಳಿಸಿರುತ್ತಾರೆ.