Rajnath Singh On CJP Protest:
ವಿದ್ಯಾರ್ಥಿಗಳ ಸಮಸ್ಯೆ ಆಲಿಸೋದು, ಪರಿಹರಿಸುವುದು ಸರ್ಕಾರದ ಜವಾಬ್ದಾರಿ. ಯುವಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದರೆ, ಅದನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಅವರಿಗೆ ಇದೆ. ಪ್ರಗತಿ, ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದ ಹಾದಿಯನ್ನು ಅವರು ಆರಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಬದ್ಧರಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭರವಸೆ ಕೊಟ್ಟರು.
ಧರ್ಮೇಂಧ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯಲ್ಲಿ ಪ್ರತಿಭಟನೆ ಮುಂದುವರೆಸಿದೆ. ಸೋಮವಾರ ನಡೆದ ಹೋರಾಟಲ್ಲಿ ಪೊಲೀಸರು ಅವರ ಮೇಲೆ ನಡೆಸಿ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ಇಂಡಿಯಾ ಒಕ್ಕೂಟ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಉಲ್ಲೇಖಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದಾರೆ.
ರಾಜನಾಥ್ ಸಿಂಗ್ ಹೇಳಿದ್ದೇನು?
ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಕಳವಳಕಾರಿಯದ್ದು. ಕೆಲವು ರಾಜಕೀಯ ಹಿತಾಸಕ್ತಿಗಳು ವಿದ್ಯಾರ್ಥಿಗಳನ್ನು ರಾಜಕೀಯ ದಾಳವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ದುರದೃಷ್ಟಕರ. ಪ್ರಧಾನಿ ಮೋದಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಮಸ್ಯೆ, ಆಕಾಂಕ್ಷೆಗಳನ್ನು ಆಲಿಸಿ, ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ ಎಂದು ರಾಜನಾಥ್ ಸಿಂಗ್ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಭರವಸೆ ಕೊಟ್ಟರು.
ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ ವಿಪಕ್ಷ ನಾಯಕರು ವಿದ್ಯಾರ್ಥಿಗಳನ್ನು ಬಳಸಿಕೊಂಡು ಅವರಲ್ಲಿ ಕೃತಕ ಕೋಪ ಸೃಷ್ಟಿಸಿ, ಹೈಡ್ರಾಮಾ ನಿರ್ಮಾಣವಾಗುವಂತೆ ಮಾಡುತ್ತಿದೆ. ಸಾರ್ವಜನಿಕರನ್ನು ವಿಶೇಷವಾಗಿ ಯುವಜನರನ್ನು ದಾರಿ ತಪ್ಪಿಸುವ ವಿಫಲ ಪ್ರಯತ್ನವಾಗಿದೆ ಎಂದು ಹೇಳಿದರು.
ವಿಪಕ್ಷ ನಾಯಕರು ಸೂಕ್ತವಲ್ಲದ ಸ್ಥಳವಾದ ಬೀದಿಯಲ್ಲಿ ಚರ್ಚೆಗೆ ಬೇಡಿಕೆನ್ನು ಇಡುತ್ತಿದೆ. ಸಂಸತ್ತಿನಲ್ಲಿ ಸಮಸ್ಯೆ ಬಗೆಹರಿಸುವ ಬಗ್ಗೆ ಮಾತನಾಡಲು ಬಿಡಲಿ. ವಿಪಕ್ಷ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಲು ಮುಕ್ತ ಅವಕಾಶವಿದೆ ಎಂದು ಸಚಿವ ರಾಜ್ನಾಥ್ ಸಿಂಗ್ ಹೇಳಿದರು, (ಏಜೆನ್ಸೀಸ್).