ನವದೆಹಲಿ: ಏ. 16ರಿಂದ ಮೂರು ದಿನಗಳ ಕಾಲ ನಡೆಯುವ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬೆಂಬಲಿಸುವಂತೆ ಪ್ರಧಾನಿ ಮೋದಿ ಬರೆದಿರುವ ಪತ್ರಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ರಾಜಕೀಯ ಲಾಭ ಪಡೆಯಲು ಚುನಾವಣಾ ನಡುವೆ ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಆತುರ ಪಡುತ್ತಿದೆ ಎಂದಿದ್ದಾರೆ.