ಅಂದಹಾಗೆ, ಪ್ರತಿದಿನ ಸುಮಾರು 2,200 ವಿಮಾನಗಳನ್ನು ನಿರ್ವಹಿಸುವ ಇಂಡಿಗೋ, ತನ್ನ ಕಾರ್ಯಾಚರಣೆಯಲ್ಲಿ ಭಾರಿ ಅಡ್ಡಿಯಾಗಿರುವುದನ್ನು ಒಪ್ಪಿಕೊಂಡಿದೆ. ಅಲ್ಲದೆ, ಈ ಕುರಿತು ತನ್ನ ಗ್ರಾಹಕರಲ್ಲಿ ಕ್ಷಮೆ ಕೂಡ ಕೇಳಿದೆ. ಸಣ್ಣ ತಂತ್ರಜ್ಞಾನದ ದೋಷಗಳು, ಚಳಿಗಾಲಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯಲ್ಲಿನ ಬದಲಾವಣೆಗಳು, ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು, ವಾಯುಯಾನ ವ್ಯವಸ್ಥೆಯಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆ ಮತ್ತು ಇತ್ತೀಚೆಗೆ ಅಪ್ಡೇಟ್ ಮಾಡಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ (ವಿಮಾನ ಕರ್ತವ್ಯ ಸಮಯ ಮಿತಿಗಳು) ಅನುಷ್ಠಾನ ಸೇರಿದಂತೆ ಹಲವಾರು ಅಂಶಗಳು ನಮ್ಮ ವಿಮಾನ ಕಾರ್ಯಾಚರಣೆಗಳ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ವಿಮಾನಯಾನ ಸಂಸ್ಥೆ ಬುಧವಾರ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.