ಬೆಳ್ಳಿ 2,000 ರೂ. ಕುಸಿತ! ಚಿನ್ನ? ಹೀಗಿದೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ | Gold Rates

ಚಿನ್ನ-ಬೆಳ್ಳಿ
ಚಿನ್ನ-ಬೆಳ್ಳಿ
Published on

ಪ್ರಮುಖ ಮುಖ್ಯಾಂಶಗಳು

  • ಚಿನ್ನ-ಬೆಳ್ಳಿ ಇಳಿಕೆ ಹಾದಿಯನ್ನು ಹಿಡಿದಿದೆ
  • ಬೆಳ್ಳಿ 2000 ರೂ. ಕುಸಿತ
ನವದೆಹಲಿ: ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಸನ್ನಿಹಿತ. ಕಳೆದ ಕೆಲವು ದಿನಗಳಿಂದ ಏರಿಕೆಯತ್ತ ಸಾಗುತ್ತಿದ್ದ ಗೋಲ್ಡ್​ ಬೆಲೆ ಮತ್ತೆ ಕುಸಿತ ಕಂಡಿದೆ. ಈ ವಾರದ ಆರಂಭದಿಂದಲೇ ಚಿನ್ನ-ಬೆಳ್ಳಿ ಇಳಿಕೆ ಹಾದಿಯನ್ನು ಹಿಡಿದಿರುವುದು ಸದ್ಯ ಖರೀದಿದಾರರ ಮುಖದಲ್ಲಿ ಸಂತಸ ಮೂಡಿಸಿದೆ. ಇಂದು, 10 ಗ್ರಾಂ 24 ಕ್ಯಾರೆಟ್​ ಚಿನ್ನದ ಬೆಲೆ 110 ರೂ. ಇಳಿಕೆಯಾಗಿದ್ದು, ಪ್ರತಿ ಕೆಜಿ ಬೆಳ್ಳಿ ಬೆಲೆ 2,000 ರೂ. ಕುಸಿದಿದೆ.
10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ 110 ರೂ. ಇಳಿಕೆಯಾಗಿದ್ದು, 1,24,970 ರೂ. ಆಗಿದೆ. 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ಬೆಲೆ 100 ರೂ. ಕುಸಿದು, 1,14,550 ರೂ.ಗೆ ತಲುಪಿದೆ. ಇನ್ನು 10 ಗ್ರಾಂಗೆ 18 ಕ್ಯಾರೆಟ್ ಚಿನ್ನದ ಬೆಲೆ 80 ರೂ. ಇಳಿದಿದ್ದು, 93,730 ರೂ.ನಲ್ಲಿ ವಹಿವಾಟು ನಡೆಸುತ್ತಿದೆ. ಇದರೊಂದಿಗೆ, ಬುಲಿಯನ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ 1,67,000 ರೂ.ಗೆ ಮಾರಾಟವಾಗುತ್ತಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ
  • ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,24,970 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,14,550 ರೂ. ಆಗಿದೆ.
  • ಮುಂಬೈ, ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,24,970 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,14,550 ರೂ.ಗೆ ಬಂದು ನಿಂತಿದೆ.
  • ಇನ್ನು ಹೈದರಾಬಾದ್​ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,24,970 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,14,550 ರೂ. ಆಗಿದೆ.

ಬೆಳ್ಳಿ 2000 ರೂ. ಕುಸಿತ

  • ದೆಹಲಿಯಲ್ಲಿ ಒಂದು ಕೆಜಿ ಬೆಳ್ಳಿ ಇಂದು 1,67,000 ರೂ.ಗೆ ತಲುಪಿದೆ.ಮುಂಬೈ,
  • ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿಯ ಬೆಲೆ 1,67,000 ರೂ. ಇದೆ.ಇನ್ನು ಚೆನ್ನೈ,
  • ಹೈದರಾಬಾದ್‌, ತೆಲಂಗಾಣದಲ್ಲಿ ಪ್ರತಿ ಕೆಜಿ ಬೆಲೆ 1,73,000 ರೂ. ಆಗಿದೆ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net