ಗುರುವಾರ (ಮಾ.12) 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 1,090 ರೂ. ಇಳಿಕೆಯಾಗಿದೆ. ಇನ್ನು ಬೆಳ್ಳಿ ಪ್ರತಿ ಕೆಜಿಗೆ 10,000 ರೂ.ಗಳಷ್ಟು ಕಡಿಮೆಯಾಗಿದೆ. ಬುಲಿಯನ್ ಮಾರುಕಟ್ಟೆಯಲ್ಲಿ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಇಂದು 1,62,220 ರೂ. ಆಗಿದೆ. ಅದೇ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,000 ರೂ.ಗೆ ಕುಸಿದು, 1,48,700 ರೂ. ಆಗಿದೆ. ಇನ್ನು 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 810 ರೂ. ಕಡಿಮೆಯಾಗಿದ್ದು, 1,21,670 ರೂ.ನಲ್ಲಿ ವಹಿವಾಟು ನಡೆಸುತ್ತಿದೆ.