ಕುಸಿತದ ಹಾದಿಯಲ್ಲಿ ಚಿನ್ನ! ಬೆಳ್ಳಿ 5,000 ರೂ. ಇಳಿಕೆ; ಹೀಗಿದೆ ಇಂದಿನ ದರ ಪಟ್ಟಿ | Gold Rates
ಗೋಲ್ಡ್
Published on:
Copied
Follow Us
ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಕುಸಿತ ಕಾಣುತ್ತಿದೆ. ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,740 ರೂ. ಇಳಿದು 1,23,660 ರೂ.ಗೆ ತಲುಪಿದೆ.
ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,600 ರೂ.ಗಳಷ್ಟು ಇಳಿಕೆಯಾಗಿ, 1,13,350 ರೂ.ಗೆ ತಲುಪಿದೆ. ಇನ್ನು 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,310 ರೂ. ಕುಸಿತ ಕಂಡಿದ್ದು, 92,740 ರೂ. ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ
ಇಂದು ದೆಹಲಿಯಲ್ಲಿ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,23,810 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,13,500 ರೂ. ಆಗಿದೆ.ಮುಂಬೈ,
ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,23,660 ರೂ.ಗೆ ತಲುಪಿದೆ. ಅದೇ ರೀತಿ, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,13,350 ರೂ.ಗೆ ಬಂದು ನಿಂತಿದೆ. ಇನ್ನು
ಹೈದರಾಬಾದ್ ಸೇರಿದಂತೆ ತೆಲುಗು ರಾಜ್ಯಗಳಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,23,660 ರೂ.ಗೆ ತಲುಪಿದೆ. ಅದೇ ರೀತಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,13,350 ರೂ. ಆಗಿದೆ.