ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

ಪ್ರಧಾನಿ ಮೋದಿ ಮತ್ತು ಶ್ರೀಮತಿ ಚೆನ್ನಮ್ಮ
ಪ್ರಧಾನಿ ಮೋದಿ ಮತ್ತು ಶ್ರೀಮತಿ ಚೆನ್ನಮ್ಮ
Published on
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಧರ್ಮಪತ್ನಿ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ತಾಯಿ ಶ್ರೀಮತಿ ಚೆನ್ನಮ್ಮ ದೇವೇಗೌಡ (85) ಅವರು ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ(PM Modi) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ವಿನಮ್ರತೆ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವ ಉತ್ಸಾಹ ಮೆಚ್ಚುವಂತಹದ್ದಾಗಿತ್ತು. ಈ ದುಃಖದ ಸಮಯದಲ್ಲಿ ದೇವೇಗೌಡರ ಮತ್ತು ಅವರ ಇಡೀ ಕುಟುಂಬದೊಂದಿಗೆ ನಾವಿದ್ದೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಜ್ಯಪಾಲ ಗೆಹ್ಲೋಟ್​ರಿಂದ ಸಂತಾಪ

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂದೇಶ ಬಿಡುಗಡೆ ಮಾಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸರಳತೆ, ಸೌಜನ್ಯದಿಂದ ಕೂಡಿದ ಅವರ ಜೀವನ ಎಲ್ಲರಿಗೂ ಆದರ್ಶಪ್ರಾಯವಾಗಿದೆ. ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net