ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ. ಆದಾಗ್ಯೂ, ರಸ್ತೆಗಿಳಿದು ಹೋರಾಡುತ್ತಿರುವ ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಲು ಮತ್ತು ಬೆಂಬಲವಾಗಿ ನಿಲ್ಲುವಂತೆ ಸೌರವ್ ದಾಸ್ ಸಂಸದರಿಗೆ ಮನವಿ ಮಾಡಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕೆಂದು ಆಗ್ರಹಿಸಿ ಸಿಜೆಪಿ ಸಂಸ್ಥೆಯು ಸಂಸದ್ ಚಲೋ ಮೆರವಣಿಗೆಯನ್ನು ಆಯೋಜಿಸಿತ್ತು. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭದ ದಿನದಂದೇ ಸಾವಿರಾರು ಬೆಂಬಲಿಗರು ಮತ್ತು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿ, ಅಲ್ಲಿಂದ ಸಂಸತ್ ಭವನದತ್ತ ತೆರಳಲು ಯತ್ನಿಸಿದರು.