ಸುಪ್ರೀಂ ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳ ವಿರುದ್ಧ ವೆಪನ್ ಆಗಿ ಬಳಸಿದ್ರೆ ಮತ್ತೆ ಪ್ರತಿಭಟನೆ: ಕೇಂದ್ರಕ್ಕೆ ಸಿಜೆಪಿ ಎಚ್ಚರಿಕೆ | CJP warns

ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ
ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ
Published on
ನವದೆಹಲಿ: ಈಗಾಗಲೇ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಯನ್ನು ಮುಂದುವರಿಸಲು ಸುಪ್ರೀಂಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ವೆಪನ್ ಆಗಿ ಬಳಸಿಕೊಂಡು ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮುಂದಾದ್ರೆ ಮತ್ತೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ(CJP warns), ಮಂಗಳವಾರ(ಜು. 28) ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಜೆಪಿ, ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳ ತನಿಖೆಯನ್ನು ಮುಂದುವರಿಸಲು ಸರ್ಕಾರಗಳಿಗೆ ಅನುಮತಿ ನೀಡುವ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶವು ಜುಲೈ 25ರಂದು ಕೇಂದ್ರವು ನೀಡಿದ ಪ್ರಕರಣಗಳ ಹಿಂತೆಗೆತ ಮತ್ತು ಪ್ರತಿಭಟನಾಕಾರರನ್ನು ಬಂಧಿಸುವುದಿಲ್ಲ ಎಂಬ ಭರವಸೆಗೆ ನೇರ ವಿರೋಧಾಭಾಸವಿದೆ. ಇನ್ನೂ ಕೇಂದ್ರ ಸರ್ಕಾರ ಜುಲೈ 25ರ ಭರವಸೆಗಳನ್ನು ಪೂರೈಸುವ ಗಡುವು ಮಂಗಳವಾರ ಮುಗಿದಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದೆ.
ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಹಾಕಿರುವ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ, ಪೊಲೀಸರಿಂದ ವಿದ್ಯಾರ್ಥಿಗಳ ಮೇಲಿನ ಕಿರುಕುಳ ಮುಂದುವರಿದ್ರೆ, ಸಿಜೆಪಿ ಶೀಘ್ರದಲ್ಲೇ ಬೃಹತ್ ಶಾಂತಿಯುತ ಪ್ರತಿಭಟನೆಯೊಂದಿಗೆ ಪ್ರತಿಕ್ರಿಯಿಸುತ್ತದೆ. ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಬೇಟೆಯಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಇನ್ನೂ ಸಿಜೆಪಿ ರಾಷ್ಟ್ರೀಯ ವಕ್ತಾರ ಸೌರವ್ ದಾಸ್, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳು ಯಾಲಯದ ಆದೇಶವನ್ನು 'ಆಯುಧ'ವನ್ನಾಗಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ನಮ್ಮ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮುಂದಾದ್ರೆ, ಭಾರತದ ಬೀದಿಗಳು ಮತ್ತೊಮ್ಮೆ ಅದರ ಯುವಕರ ಧ್ವನಿಯಾಗುತ್ತವೆ ಎಂದು ಎಚ್ಚರಿಸಿದ್ದಾರೆ.
ಎಫ್‌ಐಆರ್‌ಗಳನ್ನು ಹಿಂಪಡೆಯಲಾಗುತ್ತದೆ ಮತ್ತು ಶಾಂತಿಯುತ ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಯಾವುದೇ ಪ್ರತಿಭಟನಾಕಾರರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಗುರಿಯಾಗಿಸಲಾಗುವುದಿಲ್ಲ ಎಂಬ ಕೇಂದ್ರದ ಭರವಸೆಯಿಂದ ಸಿಜೆಪಿ ತನ್ನ ರಾಷ್ಟ್ರವ್ಯಾಪಿ ಆಂದೋಲನವನ್ನು ರದ್ದುಗೊಳಿದೆ. ಈಗ ನ್ಯಾಯಾಲಯದ ಆದೇಶವನ್ನು ಅದಕ್ಕೆ ಗುರಾಣಿಯಾಗಿಸಬಾರದು. ಕೇಂದ್ರವು ತನ್ನ ಭರವಸೆಗಳ ನಿಯಮಗಳನ್ನು ಸುಪ್ರೀಂ ಕೋರ್ಟ್ ಮುಂದೆ ಇಡಬೇಕು ಎಂದು ಹೇಳಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net