ಬ್ಯಾನರ್, ಫ್ಲೆಕ್ಸ್ ಹಾಕದಂತೆ ಕಾರ್ಯಕರ್ತರಿಗೆ ಸಿಎಂ ವಿಜಯ್ ಮನವಿ; ಉಲ್ಲಂಘಿಸಿದ್ರೆ ಕಠಿಣ ಕ್ರಮ | CM Vijay

ದಳಪತಿ ವಿಜಯ್
ದಳಪತಿ ವಿಜಯ್
Published on
ಚೆನ್ನೈ: ತಮಿಳುನಾಡು ನೂತನ ಸಿಎಂ ದಳಪತಿ ವಿಜಯ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಹಾಕದಂತೆ ತಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದ್ದು, ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟಿವಿಕೆ ಪ್ರಧಾನ ಕಚೇರಿಯಿಂದ ಪ್ರಕಟಣೆ ಹೊರಡಿಸಿದ್ದು, ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಸ್ಥಾಪಿಸಲಾಗಿದೆ. ಕಾರ್ಯಕರ್ತರು ಜನರಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸೂಚನೆ ನೀಡಲಾಗಿದೆ.
ನಾಯಕರ ಜನ್ಮದಿನಗಳು ಅಥವಾ ಕುಟುಂಬ ಆಚರಣೆಗಳ ಸಂದರ್ಭದಲ್ಲಿ ಬೀದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಜನಸಂದಣಿ ಇರುವ ಸ್ಥಳಗಳಲ್ಲಿ ಹಾಗೂ ಟ್ರಾಫಿಕ್ ಜಾಮ್ ಇರುವ ಸ್ಥಳಗಳಲ್ಲಿ ಯಾವುದೇ ಬ್ಯಾನರ್‌ಗಳು, ಪೋಸ್ಟರ್‌ಗಳು ಅಥವಾ ಫ್ಲೆಕ್ಸ್‌ಗಳನ್ನು ಹಾಕದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಲಾಗಿದೆ.
ಜೊತೆಗೆ ಜನರಿಗೆ ಅನಾನುಕೂಲ ಉಂಟುಮಾಡುವ ಪಕ್ಷದ ಶಿಸ್ತನ್ನು ಉಲ್ಲಂಘಿಸುವವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನರು ನಮ್ಮ ಮೇಲೆ ಹೆಚ್ಚಿನ ನಂಬಿಕೆ ಇಟ್ಟಿದ್ದಾರೆ. ತಮಿಳುನಾಡು ಅಭಿವೃದ್ಧಿಯತ್ತ ಸಾಗುತ್ತಿರುವ ಸಮಯದಲ್ಲಿ, ಸಾರ್ವಜನಿಕ ಹಿತಾಸಕ್ತಿಗೆ ಹಾನಿ ಮಾಡುವ ಯಾವುದೇ ಕ್ರಮಗಳನ್ನು ಸಹಿಸುವುದಿಲ್ಲ. ಈ ಹಿನ್ನೆಲೆ ಜವಾಬ್ದಾರಿಯುತವಾಗಿ ವರ್ತಿಸುವಂತೆ ಪಕ್ಷವು ಕಾರ್ಯಕರ್ತರಿಗೆ ಸಲಹೆ ನೀಡಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net