ಈ ಬಗ್ಗೆ ಬುಧವಾರ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿದ ನಂತರ ಮಾತನಾಡಿದ ಮುಖ್ಯಮಂತ್ರಿ ವಿಜಯ್, ನನ್ನ ಆಡಳಿತವು ಕುದುರೆಯ ವೇಗದಲ್ಲಿ ಕಾರ್ಯನಿರ್ವಹಿಸಲಿದೆ. ನಾವು ಕ್ಲೀನ್ ಮತ್ತು ದಕ್ಷ ಸರ್ಕಾರವನ್ನು ನೀಡಲಿದ್ದೇವೆ ಎಂದು ಗುಡುಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಮಕ್ಕಳು, ರೈತರು, ಯುವಕರು ಮತ್ತು ಸರ್ಕಾರಿ ನೌಕರರ ಹಕ್ಕುಗಳನ್ನು ರಕ್ಷಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.