ಆದರೆ ಇತ್ತೀಚೆಗೆ ರಾಜ್ಯಸಭೆಯಲ್ಲಿ ಸರ್ಕಾರ, ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ನೀಡಿದ ಉತ್ತರದಲ್ಲಿ, ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ, ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರವು ತಮಿಳುನಾಡು, ಕೇರಳ ಅಥವಾ ಪುದುಚೇರಿ ರಾಜ್ಯಗಳ ಅನುಮತಿ ಪಡೆಯಬೇಕೆಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಹೇಳಿದೆ.