ಪ್ರತಿ ಜಿಲ್ಲೆಯಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ | CM Yogi Adityanath

ಸಿಎಂ ಯೋಗಿ ಆದಿತ್ಯನಾಥ್
ಸಿಎಂ ಯೋಗಿ ಆದಿತ್ಯನಾಥ್
Published on
ನವದೆಹಲಿ: ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದಿಂದ ವಿಶೇಷ ಮತದಾರ ಪಟ್ಟಿ ತೀವ್ರ ಪರಿಷ್ಕರಣೆ ನಡುವೆಯೂ ಅಕ್ರಮ ವಲಸಿಗರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್(CM Yogi Adityanath) ನಿರ್ದೇಶನ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ, ರಾಷ್ಟ್ರೀಯ ಭದ್ರತೆ ಹಾಗೂ ಸಾಮಾಜಿಕ ಸಾಮರಸ್ಯವು ತಮ್ಮ ಆಡಳಿತದ ಪ್ರಮುಖ ಆದ್ಯತೆಗಳಾಗಿವೆ ಎಂದು ಪುನರುಚ್ಚರಿಸದ್ದು, ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
"ಪ್ರತಿ ಜಿಲ್ಲೆಯಲ್ಲಿ ಆಡಳಿತಾಧಿಕಾರಿಗಳು ತಮ್ಮ ಪ್ರದೇಶದಲ್ಲಿ ವಾಸಿಸುವ ಅಕ್ರಮ ವಲಸಿಗರನ್ನು ಗುರುತಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಬೇಕು. ಒಳನುಸುಳುಕೋರರನ್ನು ಇರಿಸಲು ಪ್ರತಿ ಜಿಲ್ಲೆಯಲ್ಲಿ ತಾತ್ಕಾಲಿಕ ಬಂಧನ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಎಂದು ಸೂಚಿಸಿದ್ದಾರೆ.
ವಿದೇಶಿ ಪೌರತ್ವ ಹೊಂದಿರುವ ಅಕ್ರಮ ವಲಸಿಗರನ್ನು ಅಗತ್ಯ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆ ಕೇಂದ್ರಗಳಲ್ಲಿ ಇರಿಸಬೇಕು. ಬಂಧನ ಕೇಂದ್ರಗಳಲ್ಲಿ ಇರಿಸಲಾಗಿರುವವರನ್ನು ಸ್ಥಾಪಿತ ಕಾರ್ಯವಿಧಾನಗಳನ್ನು ಅನುಸರಿಸಿ ಅವರ ಮೂಲ ದೇಶಗಳಿಗೆ ಗಡೀಪಾರು ಮಾಡಲಾಗುವುದು ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net