ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ, ಜಿಎಸ್‌ಟಿ ಆಯುಕ್ತ ಪ್ರಶಾಂತ್ ಸಿಂಗ್, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಮಾಡಿರುವ ಆರೋಪಗಳನ್ನು ವಿರೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೆಂಬಲಿಸಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದೇನೆ. ಕಳದೆ ಮೂರು ದಿನಗಳಿಂದ ನಡೆದ ಬೆಳವಣಿಗೆಯಿಂದ ತಮಗೆ ನೋವಾಗಿದೆ ಎಂದು ಹೇಳಿದ್ದಾರೆ.