ಕಲ್ಲಿದ್ದಲು ಮಾಫಿಯಾ: ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಕಡೆ ಇಡಿ ದಾಳಿ | ED Raid

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ED Raid: ಅಕ್ರಮವಾಗಿ ಕಲ್ಲಿದ್ದಲು ಸಾಗಾಟ ಮತ್ತು ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು(ನ. 21) ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.
ಅಕ್ರಮವಾಗಿ ದೊಡ್ಡ ಮಟ್ಟದಲ್ಲಿ ಕಲ್ಲಿದ್ದಲನ್ನು ಸಾಗಾಟ ಮಾಡಿ ಸರ್ಕಾರಕ್ಕೆ ನೂರಾರು ಕೋಟಿ ರೂ. ನಷ್ಟವನ್ನುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅದರ ಭಾಗವಾಗಿ ಜಾರ್ಖಂಡ್‌ನಲ್ಲಿ ಸುಮಾರು 18 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಅದೇ ರೀತಿ ಪಶ್ಚಿಮ ಬಂಗಾಳದ ದುರ್ಗಾಪುರ, ಪುರುಲಿಯಾ, ಹೌರಾ ಹಾಗೂ ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿವೆ.
ಈ ಕಾರ್ಯಾಚರಣೆ ಪ್ರಮುಖವಾಗಿ ಕಲ್ಲಿದ್ದಲು ಕಳ್ಳತನ, ಅಕ್ರಮ ಸಾಗಾಣೆ ಸಂಬಂಧಿಸಿದ್ದಾಗಿದ್ದು, ಪ್ರಮುಖವಾಗಿ ಅನಿಲ್ ಗೋಯಲ್, ಸಂಜಯ್ ಉದ್ಯೋಗ್, ಎಲ್ ಬಿ ಸಿಂಗ್ ಹಾಗೂ ಅಮರ್ ಮಂಡಲ್ ಅವರಿಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ. ಜೊತೆಗೆ ನರೇಂದ್ರ ಖಾರ್ಕಾ, ಯುಧಿಷ್ಠಿರ್ ಘೋಷ್, ಕೃಷ್ಣ ಮುರಾರಿ ಕಾಯಲ್ ಸೇರಿದ ಸ್ಥಳಗಳಲ್ಲೂ ಶೋಧಿಸಲಾಗುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net