2023 ಮಾರ್ಚ್ನಲ್ಲಿ ಸುಪ್ರೀಂಕೋರ್ಟ್ ಸಿಜೆಐ, ಪ್ರಧಾನಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಸಮಿತಿ ಚುನಾವಣಾ ಆಯುಕ್ತರ ನೇಮಕಾತಿಯನ್ನು ಮಾಡಬೇಕು ಎಂದು ತೀರ್ಪು ನೀಡಿತ್ತು. ಆದರೆ ಅದೇ ವರ್ಷ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಕಾತಿ ಕಾನೂನನ್ನು ತಿದ್ದುಪಡಿ ಮಾಡಿ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಸಿಜೆಐ ಬದಲಿಗೆ ಪ್ರಧಾನಿ ನಾಮನಿರ್ದೇಶನ ಮಾಡಿದ ಕ್ಯಾಬಿನೆಟ್ ಸಚಿವರನ್ನು ನೇಮಿಸುವ ಕಾನೂನನ್ನು ಜಾರಿಗೆ ತಂದಿತು (ಏಜೆನ್ಸೀಸ್).