ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಬಾಂಗ್ಲಾ ರೀತಿ ದೇಶದಲ್ಲಿ ಆಡಳಿತ ಬದಲಾವಣೆಗೆ ಪ್ರಯತ್ನಿಸುತ್ತಿವೆ: ರಾಜನಾಥ್ ಸಿಂಗ್ ಆರೋಪ | Rajnath Singh

ದೆಹಲಿಯಲ್ಲಿ ನಡೆಯುತ್ತಿರುವ ಎಸ್​ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆಗಳ ಕುರಿತು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ಶುಕ್ರವಾರ(ಅ. 16) ವಾಗ್ದಾಳಿ ನಡೆಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಾಂಗ್ಲಾ ರೀತಿ ದೇಶದಲ್ಲಿ ಆಡಳಿತ ಬದಲಾವಣೆಗೆ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್
Published on: 

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಎಸ್​ಐಆರ್ ಮತ್ತು ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆಗಳ ಕುರಿತು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ಶುಕ್ರವಾರ(ಅ. 16) ವಾಗ್ದಾಳಿ ನಡೆಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಾಂಗ್ಲಾ ರೀತಿ ದೇಶದಲ್ಲಿ ಆಡಳಿತ ಬದಲಾವಣೆಗೆ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಯಾರಿಗೂ ಅವ್ಯವಸ್ಥೆ ಸೃಷ್ಟಿಸಲು, ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಹಾಳು ಮಾಡಲು ಅವಕಾಶ ನೀಡುವುದಿಲ್ಲ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದಲ್ಲಿ ಅರಾಜಕತೆ ಹರಡಲು ಯುವಕರ ಶಕ್ತಿಯನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು, ನೇರವಾಗಿ ಹಾಗೂ ತಮ್ಮ ಬೆಂಬಲಿತ ಸಂಘಟನೆಗಳ ಮೂಲಕ, ಯುವಜನರ ಶಕ್ತಿಯನ್ನು ರಚನಾತ್ಮಕ ಕಾರ್ಯಗಳು ಮತ್ತು ರಾಷ್ಟ್ರ ನಿರ್ಮಾಣದತ್ತ ಬಳಸುವ ಬದಲು, ರಾಜಕೀಯ ಸಂಘರ್ಷವನ್ನು ಹೆಚ್ಚಿಸಲು ಮತ್ತು ಅರಾಜಕತೆಯನ್ನು ಹರಡಲು ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದಿದ್ದಾರೆ.

ಆಡಳಿತ ಬದಲಾವಣೆಗೆ ಬಾಂಗ್ಲಾದೇಶದಿಂದ ಸ್ಫೂರ್ತಿ ಪಡೆದಿದ್ದೇವೆ ಎಂದು ಒಬ್ಬರು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿ ಹೇಳುತ್ತಾರೆ. ಮತ್ತೊಬ್ಬರು ಸರ್ಕಾರವನ್ನು ಉರುಳಿಸುವ ಬಗ್ಗೆ ಮುಕ್ತವಾಗಿ ಮಾತನಾಡುತ್ತಾರೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಗೊಳಿಸುವುದು ಮತ್ತು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸುವುದು ಮಾತ್ರವೇ ಅವರ ಏಕೈಕ ಕಾರ್ಯಸೂಚಿಯಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read
ವಂಚನೆ, ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪ: ಪತಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉತ್ತರಾಖಂಡ್ ಸಚಿವೆ ರೇಖಾ | Minister Rekha
ರಕ್ಷಣಾ ಸಚಿವ ರಾಜನಾಥ್ ಸಿಂಗ್

ಗುರುವಾರ ಸುಪ್ರೀಂ ಕೋರ್ಟ್‌ನ ಅವಲೋಕನಗಳನ್ನು ಉಲ್ಲೇಖಿಸಿದ ಸಿಂಗ್, ಅರಾಜಕತೆಯನ್ನು ಸೃಷ್ಟಿಸಲು, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ಅಥವಾ ಭಾರತದ ಅಭಿವೃದ್ಧಿಯನ್ನು ತಡೆಯುವ ಪ್ರಯತ್ನಗಳನ್ನು ಪ್ರಜಾಪ್ರಭುತ್ವವು ಅನುಮತಿಸುವುದಿಲ್ಲ ಎಂಬುದನ್ನು ರಾಹುಲ್ ಗಾಂಧಿ ಮತ್ತು ಅವರ ಮಿತ್ರಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಕಾನೂನನ್ನು ಗೌರವಿಸುವುದು ಅತ್ಯಗತ್ಯ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಲು ಸಾಧ್ಯವಿಲ್ಲ. ಸುಳ್ಳುಗಳು, ಕೋಪ, ಸಂಸ್ಥೆಗಳನ್ನು ಕೆಣಕುವ ಪ್ರಯತ್ನಗಳು ಮತ್ತು ರಾಜಕೀಯ ಅವಕಾಶವಾದವು ಭಾರತದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net