ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತವನ್ನು ಅಂತ್ಯಗೊಳಿಸಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಇಂದು ಕೇವಲ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಅದು ಅರ್ಬನ್ ನಕ್ಸಲರ ಗ್ಯಾಂಗ್ ಆಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ಗುಡುಗಿದ್ದಾರೆ.