ಈ ಬಗ್ಗೆ ರಾಜ್ಯಸಭೆಯಲ್ಲಿ 2026-27ರ ಕೇಂದ್ರ ಬಜೆಟ್ ಮೇಲಿನ ಸುದೀರ್ಘ ಚರ್ಚೆಗೆ ಉತ್ತರಿಸಿದ ಸೀತಾರಾಮನ್, ಸರ್ಕಾರದ ಹಣಕಾಸು ನಿರ್ವಹಣೆಯ ಬಗ್ಗೆ ಸ್ಪಷ್ಟನೆ ನೀಡಿದರು. ನಮ್ಮ ಸರ್ಕಾರ ಕೇವಲ ಹಣದ ಹಂಚಿಕೆ ಬಗ್ಗೆ ಯೋಚಿಸುವುದಿಲ್ಲ, ಬದಲಾಗಿ ಅದರ ಫಲಿತಾಂಶ ಏನಾಗಿದೆ ಎಂಬುದರ ಮೇಲೆ ಗಮನ ಹರಿಸುತ್ತದೆ. ನಾವು ಹಣ ನೀಡಲು ಸಿದ್ಧರಿದ್ದೇವೆ. ಆದರೆ ನಮಗೆ ಫಲಿತಾಂಶ ಬೇಕು. ಕಾಂಗ್ರೆಸ್ಗೆ ಕೇವಲ ಖರ್ಚು ಮಾಡುವುದು ಗೊತ್ತು, ನಮಗೆ ಅಭಿವೃದ್ಧಿ ಮುಖ್ಯ ಎಂದು ಹೇಳಿದ್ದಾರೆ.