ಫೆಬ್ರವರಿ 4 ರಂದು ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರಿಗೆ ಸಂಸತ್ತಿಗೆ ಬರಬೇಡಿ ಎಂದು ಸಲಹೆ ನೀಡಿದ್ದರು. ವಿರೋಧ ಪಕ್ಷದ ಸಂಸದರು ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ದೈಹಿಕ ಸಂಘರ್ಷಕ್ಕೆ ಇಳಿಯುವ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ. ಬಿಜೆಪಿ ಸಂಸದ ಮನೋಜ್ ತಿವಾರಿ ಅವರು, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿ ಕುರ್ಚಿಯವರೆಗೂ ಬಂದಿದ್ದು ಪರಿಸ್ಥಿತಿಯನ್ನು ವಿಕೋಪಕ್ಕೆ ಒಯ್ದಿತ್ತು ಎಂದು ಆರೋಪಿಸಿದ್ದಾರೆ.