ಮತ್ತೊಂದೆಡೆ, ವೇಣುಗೋಪಾಲ್ ಲೋಕಸಭಾ ಸಂಸದರಾಗಿದ್ದು, ಅವರು ಮುಖ್ಯಮಂತ್ರಿಯಾಗಿದ್ದರೆ ಆರು ತಿಂಗಳೊಳಗೆ ಉಪಚುನಾವಣೆ ಎದುರಿಸಬೇಕಿತ್ತು. ಈ ಅನಿಶ್ಚಿತತೆಯನ್ನು ತಪ್ಪಿಸಲು ಕಾಂಗ್ರೆಸ್ ಸುರಕ್ಷಿತ ಹಾದಿಯನ್ನು ಆರಿಸಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಐಯುಎಂಎಲ್ ಮುಖ್ಯಸ್ಥ ಸಯ್ಯದ್ ಸಾದಿಕ್ ಅಲಿ ಶಿಹಾಬ್ ತಂಗಲ್ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದ್ದು, ಸತೀಶನ್ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್‌ಗೆ ಮುಸ್ಲಿಂ ಲೀಗ್ ಹಣೆಪಟ್ಟಿಯನ್ನು ಅಂಟಿಸಲು ಯತ್ನಿಸುತ್ತಿದೆ.