ಅಖಿಲ ಭಾರತ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಯಾಸೂಬ್ ಅಬ್ಬಾಸ್, ಮೌಲಾನಾ ಅರ್ಷದ್ ಮದನಿ ಅವರು ಹೇಳಿರುವುದು ಸರಿಯಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಬಿಟ್ಟರೆ ದೇಶದಲ್ಲಿ ನಡೆಯುವ ಅರ್ಧದಷ್ಟು ಕೋಮು ಹಿಂಸಾಚಾರ ನಿಂತುಹೋಗುತ್ತದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕೆಂದು ಅವರು ಹೇಳಿದ್ದಾರೆ, (ಏಜನ್ಸೀಸ್).