ನವೆಂಬರ್ 10ರಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಮತ್ತು ಅಲ್-ಖೈದಾಗೆ ಸಂಬಂಧಿಸಿದ ಭಯೋತ್ಪಾದಕ ಸಂಘಟನೆ ಅನ್ಸರ್ ಘಜ್ವತ್-ಉಲ್-ಹಿಂದ್‌ಗೆ ಸಂಬಂಧಿಸಿದ ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ "ವೈಟ್-ಕಾಲರ್" ಭಯೋತ್ಪಾದಕ ಮಾಡ್ಯೂಲ್ ಅನ್ನು ಭೇದಿಸಿರುವುದಾಗಿ ಘೋಷಿಸಿದರು. ಅಲ್ಲದೆ, ಸುಮಾರು 2900 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆದು, ಶಂಕಿತ ವೈದ್ಯರನ್ನು ವಶಕ್ಕೆ ಪಡೆದರು. ಅದೇ ದಿನ ಸಂಜೆ ಉಮರ್ ನಬಿ ಕೆಂಪು ಕೋಟೆ ಬಳಿ ಕಾರು ಸ್ಫೋಟಿಸಿದನು. ಸದ್ಯ ತನಿಖೆ ಮುಂದುವರಿದಿದ್ದು, ಆಘಾತಕಾರಿ ಮಾಹಿತಿಗಳು ಬೆಳಕಿಗೆ ಬರುತ್ತಲೇ ಇವೆ, (ಏಜೆನ್ಸೀಸ್).