ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (MCD) ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ (AAP) ಚುನಾವಣಾ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ, ಬಿಜೆಪಿಯ ಹಿರಿಯ ನಾಯಕ ಪ್ರವೇಶ್ ವಾಹಿ (Pravesh Wahi) ಅವರು ದೆಹಲಿಯ ನೂತನ ಮೇಯರ್ ಆಗಿ ಬುಧವಾರ (ಏಪ್ರಿಲ್ 29) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ರಾಜಾ ಇಕ್ಬಾಲ್ ಸಿಂಗ್ ಅವರು ವಾಹಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದ್ದು, ಪಾಲಿಕೆಯಲ್ಲಿ ಬಿಜೆಪಿಯ ಬಲ ಈಗ ಮತ್ತಷ್ಟು ಗಟ್ಟಿಯಾದಂತಾಗಿದೆ.