ಖಾಕಿ ಕಣ್ಗಾವಲಿನಲ್ಲಿ ರಾಜಧಾನಿ: ಹೋಳಿ ಹಬ್ಬದಂದು ದೆಹಲಿ ಪೊಲೀಸರ ಹೊಸ ರೂಲ್ಸ್ ಏನು ಗೊತ್ತಾ? Delhi Police

Delhi Police (ಚಿತ್ರ ಪಿಟಿಐ)
Delhi Police (ಚಿತ್ರ ಪಿಟಿಐ)
Published on

ಪ್ರಮುಖ ಮುಖ್ಯಾಂಶಗಳು

  • ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್​ ಇಲಾಖೆಯು 15,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕಣಕ್ಕಿಳಿಸಿದ್ದಾರೆ
  • ಸಾರ್ವಜನಿಕ ಸ್ಥಳಗಳಲ್ಲಿ ಗಲಾಟೆ ಮಾಡುವುದು, ಮಹಿಳೆಯರ ಚುಡಾಯಿಸುವುದು ಕಂಡು ಬಂದರೆ, ಸುಮಾರು 3 ತಿಂಗಳವರೆಗೆ ಪರವಾನಗಿ ರದ್ದು
  • ನೋಂದಾಯಿತ ಮಾಲೀಕರ ವಾಹನಗಳನ್ನು ಅಪ್ರಾಪ್ತ ವಯಸ್ಕರು ಓಡಿಸುವುದು ಕಂಡುಬಂದರೆ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು
ನವದೆಹಲಿ: ದೇಶಾದ್ಯಂತ ಹೋಳಿ ಹಬ್ಬ ಆಚರಿಸಲಾಗುತ್ತಿದೆ, ಈ ಸಂದರ್ಭದಲ್ಲಿ ದೆಹಲಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್​ (Delhi Police) ಇಲಾಖೆಯು 15,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕ ಸ್ಥಳಗಳಲ್ಲಿ ಗಲಾಟೆ ಮಾಡುವುದು, ಮಹಿಳೆಯರ ಚುಡಾಯಿಸುವುದು ಅಥವಾ ಅತಿಯಾದ ವೇಗದಲ್ಲಿ ವಾಹನ ಚಲಾಯಿಸುವವರು ಕಂಡು ಬಂದರೆ, ಸುಮಾರು 3 ತಿಂಗಳವರೆಗೆ ಪರವಾನಗಿಯನ್ನು ಅಮಾನತುಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹಬ್ಬದ ಸಮಯದಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಮತ್ತು ಸುಗಮ ವಾಹನ ಸಂಚಾರವನ್ನು ಖಚಿತಪಡಿಸಿಕೊಳ್ಳಲು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ರಸ್ತೆಗಳಲ್ಲಿ ಮತ್ತು ದುರ್ಬಲ ಪ್ರದೇಶಗಳಲ್ಲಿ ಅತಿವೇಗ, ಅಜಾಗರೂಕತೆ ಮತ್ತು ಝಿಗ್-ಜಾಗ್ ಚಾಲನೆ, ಕೆಂಪು ದೀಪ ಜಿಗಿತ, ತ್ರಿಬಲ್​ ರೈಡಿಂಗ್, ಹೆಲ್ಮೆಟ್ ಇಲ್ಲದೆ ಚಾಲನೆ, ವಾಹನಗಳಲ್ಲಿ ಸಾಹಸ ಈ ರೀತಿಯ ಚಟುವಟಿಕೆಗಳನ್ನು ತಡೆಗಟ್ಟಲು ದೆಹಲಿ ಸಂಚಾರ ಪೊಲೀಸರು ನಗರದ 134 ಪ್ರಮುಖ ಛೇದಕಗಳಲ್ಲಿ ವಿಶೇಷ ತಂಡಗಳನ್ನು ನಿಯೋಜಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ರಸ್ತೆ ಸುರಕ್ಷತೆ ಸಮಿತಿಯ ಪ್ರಕಾರ, ಕುಡಿದು ವಾಹನ ಚಲಾಯಿಸುವುದು, ಚಾಲನೆ ಸಮಯದಲ್ಲಿ ಮೊಬೈಲ್​ ಬಳಕೆ, ಅತಿವೇಗದ ಚಲನೆ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡುವಂತಹ ಗಂಭೀರ ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಚಾಲಕರ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳವರೆಗೆ ಅಮಾನತುಗೊಳಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದಾಗ್ಯೂ, ನೋಂದಾಯಿತ ಮಾಲೀಕರ ವಾಹನಗಳನ್ನು ಅಪ್ರಾಪ್ತ ವಯಸ್ಕರು ಅಥವಾ ಅನಧಿಕೃತ ವ್ಯಕ್ತಿಗಳು ಓಡಿಸುವುದು ಕಂಡುಬಂದರೆ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಹೋಳಿ ಹಬ್ಬದ ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಹೊರಡಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದಿನೇಶ್ ಗುಪ್ತಾ ಹೇಳಿದ್ದಾರೆ.
ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್​​ ಸಿಬ್ಬಂದಿಗಳು ಹಾಜರಿರುತ್ತಾರೆ ಜೊತೆಗೆ ಹಿರಿಯ ಅಧಿಕಾರಿಗಳು ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಿರುತ್ತಾರೆ. ಸಂಚಾರ ನಿಯಮಗಳಲ್ಲಿ ಉಲ್ಲಂಘನೆಗಳು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟೀಕರಣ ನೀಡಿದರು (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net