ಮೂಲಗಳ ಪ್ರಕಾರ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಮತ್ತು ವಿದ್ಯಾರ್ಥಿಗಳ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಾಗ ಪ್ರಧಾನ್ ಮೊದಲ ಬಾರಿಗೆ ರಾಜೀನಾಮೆ ನೀಡಲು ಮುಂದಾಗಿದ್ದರು. ನಂತರ ಜುಲೈ 20 ರಂದು ನಡೆದ ಹಿರಿಯ ಸಚಿವರ ಉನ್ನತ ಮಟ್ಟದ ಸಭೆಯಲ್ಲೂ ಅವರು ಎರಡನೇ ಬಾರಿಗೆ ಹುದ್ದೆ ತೊರೆಯುವ ಇಚ್ಛೆ ವ್ಯಕ್ತಪಡಿಸಿದ್ದರು. ಆದಾಗ್ಯೂ, ಕೇವಲ ಸಚಿವರು ರಾಜೀನಾಮೆ ನೀಡುವುದರಿಂದ ಶಿಕ್ಷಣ ವ್ಯವಸ್ಥೆ ಎದುರಿಸುತ್ತಿರುವ ಆಳವಾದ ಸವಾಲುಗಳಿಗೆ ಪರಿಹಾರ ಸಿಗುವುದಿಲ್ಲ ಎಂಬ ನಿಲುವಿಗೆ ಬಿದ್ದ ನಾಯಕರು, ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದರು. ಬದಲಿಗೆ, ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಅಗತ್ಯವಿರುವ ಸುಧಾರಣೆಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಪ್ರಧಾನ್ ಅವರಿಗೆ ಸೂಚಿಸಲಾಗಿತ್ತು. ಆದರೆ, ಈ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿರಲಿಲ್ಲ.