ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಉದ್ವಿಗ್ನ ಸ್ಥಿತಿ ಅಂತ್ಯ; ದೆಹಲಿಯಲ್ಲಿ ಮೆಟ್ರೋ ಸೇವೆ ಪುನರಾರಂಭ! Delhi Metro Services Resume
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಣೆ; ದೆಹಲಿಯಲ್ಲಿ ಸ್ಥಗಿತಗೊಂಡಿದ್ದ ಮೆಟ್ರೋ ಸೇವೆ ಪುನರಾರಂಭ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಣೆ
ದೆಹಲಿಯಲ್ಲಿ ಸ್ಥಗಿತಗೊಂಡಿದ್ದ ಮೆಟ್ರೋ ಸೇವೆ ಪುನರಾರಂಭ
ರಾಜೀವ್ ಚೌಕ್, ಮಂಡಿ ಹೌಸ್ ಸೇರಿದಂತೆ 18 ಮೆಟ್ರೋ ನಿಲ್ದಾಣಗಳಲ್ಲಿ ಆರಂಭವಾಗಲಿರುವ ಸೇವೆ
ನವದೆಹಲಿ: ಕಳೆದೊಂದು ವಾರದಿಂದ ನೀಟ್ ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ತೀವ್ರಗೊಂಡ ಹಿನ್ನಲೆ ಸುರಕ್ಷತಾ ದೃಷ್ಟಿಯಿಂದ ದೆಹಲಿಯ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗಿತ್ತು.
ಇಂದು (ಶನಿವಾರ, ಜು.25) ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ತಾತ್ಕಾಲಿಕವಾಗಿ ಸ್ಥಗಿವಾಗಿದ್ದ 18 ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಆರಂಭವಾಗಲಿದೆ (Delhi Metro Services Resume) ಎಂದು ದೆಹಲಿ ಮೆಟ್ರೋ ಆಡಳಿತ ತಿಳಿಸಿದೆ.
ಸೋಮವಾರ (ಜು.20) ರಂದು ದೆಹಲಿಯಲ್ಲಿ ನಡೆದಿದ್ದ ಬೃಹತ್ ಪ್ರತಿಭಟನೆ ಹಿನ್ನಲೆ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ಉದ್ವಗ್ನ ಪರಿಸ್ಥಿತಿ ಉಂಟಾದ ಹಿನ್ನಲೆ ಮೆಟ್ರೋ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು.
ರಾಜೀವ್ ಚೌಕ್, ಮಂಡಿ ಹೌಸ್ ಮೆಟ್ರೋ ಆರಂಭ!
ದೆಹಲಿಯಲ್ಲಿ ನೀಟ್ ಪರೀಕ್ಷೆ ವಿರೋಧಿಸಿ ಪ್ರತಿಭಟನೆ ಪ್ರಾರಂಭವಾದ ಹಿನ್ನಲೆ ಭದ್ರತಾ ದೃಷ್ಟಿಯಿಂದ ಸುಮಾರು 18 ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಅಲಭ್ಯವಾಗಿತ್ತು. ಇದರಿಂದ ದಿನನಿತ್ಯ ಮೆಟ್ರೋ ಸಾರಿಗೆಯನ್ನೇ ಅವಲಂಬಿಸಿದ್ದ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು.
ಈಗ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆ ಕಾಕ್ರೋಚ್ ಪಾರ್ಟಿ ಸಹ ತಮ್ಮ ಹೋರಾಟವನ್ನು ಹಿಂಪಡೆಯುವ ವಿಶ್ವಾಸವಿದ್ದು, ಆದ್ದರಿಂದ ಮೆಟ್ರೋ ಸೇವೆಗಳು ಪುನರಾರಂಭ ಕಾರಣಲಿವೆ ಎಂದು ಹೇಳಲಾಗುತ್ತಿದೆ.
ಅಂತಯೇ, ಮೆಟ್ರೋ ಆಡಳಿತ ಕೂಡ ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಕೇಂದ್ರ ಸಚಿವಾಲಯ ನಿಲ್ದಾಣಗಳಲ್ಲಿ ಸೇವೆ ಆರಂಭವಾಗಿದೆ ಎಂದು, ಮೆಟ್ರೋ ಆಡಳಿತ ಮಾಹಿತಿ ಹಂಚಿಕೊಂಡಿದ್ದು, ಕೆಲವೇ ಸಮಯದಲ್ಲಿ ಸ್ಥಗಿತಗೊಂಡಿದ್ದ ಎಲ್ಲಾ ನಿಲ್ದಾಣಗಳಲ್ಲಿ ಸೇವೆ ಮೊದಲಿನಂತೆ ಆರಂಭವಾಗಲಿದೆ ಎಂಬ ಭರವಸೆ ನೀಡಿದೆ, (ಏಜನ್ಸೀಸ್).