ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್, ನಿತಿನ್ ಗಡ್ಕರಿ ಮತ್ತು ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಸುವೇಂದು ಅವರೊಂದಿಗೆ ದಿಲೀಪ್ ಘೋಷ್, ಅಗ್ನಿಮಿತ್ರಾ ಪಾಲ್ ಸೇರಿದಂತೆ ಐವರು ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದರು.