ಅಲ್ಲದೆ, ಈ ಬಂಡಾಯ ನಾಯಕರು ಬಿಜೆಪಿಯ ಸುವೇಂದು ಅಧಿಕಾರಿ ಅವರೊಂದಿಗೆ ಸೇರಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ರಹಸ್ಯವಾಗಿ ಭೇಟಿಯಾಗಿದ್ದಾರೆ ಎಂದು ಟಿಎಂಸಿ ಗಂಭೀರ ಆರೋಪ ಮಾಡಿದೆ. "ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯೂಸುಫ್ ಪಠಾಣ್ ಅವರನ್ನು ನೇರವಾಗಿ ಸಂಪರ್ಕಿಸಿದ್ದಾರೆ. ಈ ಸಂಸದರು ಮಮತಾ ಬ್ಯಾನರ್ಜಿ ಅವರನ್ನು ಬಿಟ್ಟು ನರೇಂದ್ರ ಮೋದಿಯವರನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಇವರೆಲ್ಲರೂ ತಮ್ಮ ಕ್ಷೇತ್ರಗಳಿಗೆ ವಾಪಸ್ ಹೋಗಿ ಕಾರ್ಯಕರ್ತರನ್ನು ಎದುರಿಸಲಿ ನೋಡೋಣ ಎಂದು ಕಲ್ಯಾಣ್ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದಾರೆ. ಕೀರ್ತಿ ಆಜಾದ್ ಕೂಡ ಇದು ಪಕ್ಷಕ್ಕೆ ಮಾಡಿದ ದ್ರೋಹ ಎಂದಿದ್ದಾರೆ. ಆದರೆ, ಯಾರೇ ಹೋದರೂ ಮಮತಾ ಬ್ಯಾನರ್ಜಿ ಮತ್ತು ಲಕ್ಷಾಂತರ ಕಾರ್ಯಕರ್ತರು ಒಟ್ಟಿಗೇ ಇರಲಿದ್ದು, ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಟಿಎಂಸಿ ಸಾರಿದೆ,(ಏಜೆನ್ಸೀಸ್).