ವಕೀಲೆ ರಿಂಕಿ ಚಟ್ಟೋಪಾಧ್ಯಾಯ ಸಿಂಗ್ ಅವರು ಮೇ 20 ರಂದೇ ಸಿಲಿಗುರಿ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ಅವರ ದೂರಿನ ಪ್ರಕಾರ, ಮಮತಾ ಬ್ಯಾನರ್ಜಿ ಅವರು ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಅತ್ಯಂತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಒಂದು, ಕಳೆದ 2025 ರ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಹಾಗೂ ಎರಡನೆಯದು, ಇತ್ತೀಚಿನ ಬಂಗಾಳ ವಿಧಾನಸಭಾ ಚುನಾವಣೆಯ ಮುನ್ನ ಧರ್ಮತಲಾದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ್ದ ದೀದಿ, ಭಾರತ ಸೇರಿದಂತೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಸನಾತನ ಹಿಂದೂಗಳ ನಂಬಿಕೆ ಹಾಗೂ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದ್ದಾರೆ.