ದೀದಿ ರಾಹುಲ್ ಗಾಂಧಿಯವರ ಮಾತು ಕೇಳದೇ ತಪ್ಪು ಮಾಡಿದ್ರೂ..! ಇಲ್ಲದಿದ್ರೆ ರಿಸಲ್ಟ್​ ಭಿನ್ನವಾಗಿರುತ್ತಿತ್ತು; ಸಂಜಯ್ ರಾವತ್ | Sanjay Raut

ಸಂಜಯ್ ರಾವತ್
ಸಂಜಯ್ ರಾವತ್
Published on
ಮುಂಬೈ: ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಸಿಎಂ ಮಮತಾ ಬ್ಯಾನರ್ಜಿ ರಾಹುಲ್ ಗಾಂಧಿಯವರ ಮಾತು ಕೇಳದೇ ತಪ್ಪು ಮಾಡಿದ್ರು, ಇಲ್ಲದಿದ್ರೆ ಚುನಾವಣಾ ಫಲಿತಾಂಶ ಭಿನ್ನವಾಗಿರುತ್ತಿತ್ತು ಎಂದು ಶಿವಸೇನಾ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
294 ಸದಸ್ಯ ಬಲದ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆದ್ದಿದ್ದು, ಇದರೊಂದಿಗೆ ಅಖಿಲ ಭಾರತ ತೃಣಮೂಲ ಕಾಂಗ್ರೆಸ್​ನ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ ಶಿವಸೇನಾ ನಾಯಕ ಸಂಜಯ್ ರಾವತ್ ಬಂಗಾಳ ಮತ್ತು ತಮಿಳುನಾಡಿನಲ್ಲಿ ಚುನಾವಣಾ ಫಲಿತಾಂಶ ಕದಿಯಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಹುಲ್ ಗಾಂಧಿಯವರ ಮಾತನ್ನು ಕೇಳದಿರುವುದು ಮಮತಾ ದೀದಿ ದೊಡ್ಡ ತಪ್ಪು ಮಾಡಿದ್ರು. ದೀದಿ ರಾಹುಲ್ ಗಾಂಧಿ ಅವರೊಂದಿಗೆ ಕುಳಿತು ಈ ವಿಷಯದ ಬಗ್ಗೆ ಚರ್ಚಿಸಿದ್ದರೆ, ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು. ರಾಹುಲ್ ಗಾಂಧಿ ಹೇಳಿದ್ದು ನಿಜವಾಗಿದೆ. ಅವರು ದೂರದೃಷ್ಟಿಯ ನಾಯಕ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ಚುನಾವಣೆಯ ಜನಾದೇಶವನ್ನು ಕದಿಯಲಾಗಿದೆ ಎಂದಿದ್ದಾರೆ.

ಸೋಲೊಪ್ಪದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಟಿಎಂಸಿಯ ಹೀನಾಯ ಸೋಲನ್ನು ಒಪ್ಪಿಕೊಳ್ಳದ ಮಮತಾ ಬ್ಯಾನರ್ಜಿ, ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಆಯೋಗವು ಬಿಜೆಪಿಯ ಆಯೋಗ. ಇದು ಗೆಲುವು ಎಂದು ನೀವು ಭಾವಿಸುತ್ತೀರಾ? ಇದು ಅನೈತಿಕ ಗೆಲುವು, ನೈತಿಕ ಗೆಲುವು ಅಲ್ಲ. ಇದು ಲೂಟಿ, ಲೂಟಿ, ಲೂಟಿ. ನಾವು ಮತ್ತೆ ಪುಟಿದೇಳುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net