ಮತ್ತೊಂದೆಡೆ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, ಸಿಬಿಐ ತನ್ನ ತನಿಖೆಯನ್ನು ಮುಕ್ತವಾಗಿ ನಡೆಸಲಿ ಎಂದಿದ್ದು, ತನಿಖೆ ನಡೆಯುತ್ತಿರುವಾಗ ಯಾರೂ ಕೂಡ ಅನಗತ್ಯ ಊಹಾಪೋಹಗಳನ್ನು ಹರಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ, ದಿಶಾ ಸಾಲಿಯನ್ ಪ್ರಕರಣ ಮತ್ತೊಮ್ಮೆ ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಮುಂದಿನ ದಿನಗಳಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ, (ಏಜೆನ್ಸೀಸ್).