77ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ​ ಜಿಲ್ಲೆಯಲ್ಲಿ ಮಾಂಸ ಮಾರಾಟ ನಿಷೇಧಿಸಿದ ಜಿಲ್ಲಾಧಿಕಾರಿ | Meat ban

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕೊರಾಪುಟ್: ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಜ. 26ರಂದು ಜರುಗುವ ಗಣರಾಜ್ಯೋತ್ಸವ ಸಮಾರಂಭ ಹಿನ್ನೆಲೆ ಜಿಲ್ಲೆಯಾದ್ಯಂತ ಮಾಂಸ ಆಹಾರ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಇಂದು(ಜ. 24) ವರದಿಯಾಗಿದೆ.
ಶುಕ್ರವಾರ ತಹಶೀಲ್ದಾರ್‌ಗಳು, ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು (ಬಿಡಿಒಗಳು) ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೊರಾಪುಟ್ ಜಿಲ್ಲಾಧಿಕಾರಿ ಮನೋಜ್ ಸತ್ಯವಾನ್ ಮಹಾಜನ್ ಪತ್ರ ಬರೆದಿದ್ದು, ಮಾಂಸ, ಕೋಳಿ, ಮೀನು, ಮೊಟ್ಟೆ ಮತ್ತು ಇತರ ಮಾಂಸಾಹಾರಿ ಆಹಾರ ಪದಾರ್ಥಗಳ ಮಾರಾಟವನ್ನು ತಮ್ಮ ವ್ಯಾಪ್ತಿಯಲ್ಲಿ ನಿಷೇಧಿಸುವಂತೆ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಬರೆದ ಪತ್ರದ ಪ್ರಕಾರ, 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೊರಾಪುಟ್ ಜಿಲ್ಲೆಯಲ್ಲಿ ಮಾಂಸ, ಕೋಳಿ, ಮೀನು, ಮೊಟ್ಟೆ, ಇತ್ಯಾದಿ ಮತ್ತು ಇತರ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸುವ ಅಧಿಕೃತ ಅಧಿಸೂಚನೆಯನ್ನು 2026 ಜನವರಿ 26ರಂದು ನಿಮ್ಮ ವ್ಯಾಪ್ತಿಯಲ್ಲಿ ಹೊರಡಿಸಲು ನಿಮ್ಮನ್ನು ಇಲ್ಲಿ ವಿನಂತಿಸಲಾಗಿದೆ. ಹಾಗೆಯೇ ನಿಮ್ಮ ತ್ವರಿತ ಕ್ರಮಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net