ಮತಎಣಿಕೆ ಕೇಂದ್ರಗಳಲ್ಲಿ ಎಣಿಕೆಗೆ ಅಡ್ಡಿಪಡಿಸಲು ಬಿಜೆಪಿ ಸಂಚು ಆರೋಪ; ಚುನಾವಣೆ ಆಯೋಗಕ್ಕೆ ಪತ್ರ ಬರೆದ ಡಿಎಂಕೆ | DMK

ಸಿಎಂ ಎಂ.ಕೆ.ಸ್ಟಾಲಿನ್
ಸಿಎಂ ಎಂ.ಕೆ.ಸ್ಟಾಲಿನ್
Published on
ಚೆನ್ನೈ: ನಾಳೆ(ಮೇ 04) ಪ್ರಕಟವಾಗಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶದ ವೇಳೆ ಮತಎಣಿಕೆ ಕೇಂದ್ರಗಳಲ್ಲಿ ಎಣಿಕೆಗೆ ಅಡ್ಡಿಪಡಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪಿಸಿರುವ ಆಡಳಿತರೂಢ ಡಿಎಂಕೆ ಪಕ್ಷವು, ಮತಎಣಿಕೆ ಕೇಂದ್ರಗಳ ಬಳಿಕ ಕಾನೂನು ಸುವ್ಯವಸ್ಥೆಯನ್ನು ಅಡ್ಡಿಪಡಿಸುವ ಸಾಧ್ಯತೆಯಿದ್ದು, ಯಾವುದೇ ಅಹಿತರ ಘಟನೆ ನಡೆಯದಂತೆ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಭಾನುವಾರ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದು, ಕೇಂದ್ರದ ಬಿಜೆಪಿ ಸೂಚನೆಯಂತೆ ಸ್ಥಳೀಯ ಬಿಜೆಪಿ ನಾಯಕರು ಮತ್ತು ಇತರೆ ಪಕ್ಷಗಳ ನಾಯಕರು ಎಣಿಕೆ ಕೇಂದ್ರಗಳಲ್ಲಿ ಗೊಂದಲ ಸೃಷ್ಟಿಸಲು ಕಾರ್ಯತಂತ್ರ ರೂಪಿಸುತ್ತಿವೆ ಎಂಬ ವಿಶ್ವಾಸಾರ್ಹ ಮಾಹಿತಿ ತಮಗೆ ಇದೆ. ಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ಪಕ್ಷದ ಕಚೇರಿಗಳು ಇರುವ ಸೂಕ್ಷ್ಮ ಪ್ರದೇಶಗಳಲ್ಲಿಯೂ ಸಹ ಗೊಂದಲ ಉಂಟಾಗಬಹುದು ಎಂದು ತಿಳಿಸಿದ್ದಾರೆ.
ಈ ಗೊಂದಲ ಚುನಾವಣಾ ಪ್ರಕ್ರಿಯೆಯ ಮುಕ್ತ ಮತ್ತು ಸುಗಮ ನಡವಳಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮತ್ತು ಏಜೆನ್ಸಿಗಳ ನಡುವೆ ಸಮನ್ವಯವನ್ನು ಬಲಪಡಿಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಏ. 23ರಂದು ಒಂದೇ ಹಂತದಲ್ಲಿ 234 ಸ್ಥಾನಗಳಿಗೆ ಮತದಾನ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಹಲವು ಎಕ್ಸಿಟ್ ಪೋಲ್ ಪ್ರಕಾರ, ಮತ್ತೆ ಡಿಎಂಕೆ ಮೈತ್ರಿಕೂಟ ಗೆಲ್ಲುವ ಮುನ್ಸೂಚನೆ ನೀಡಿದ್ರೆ, ಕೆಲವು ಎಕ್ಸಿಟ್ ಪೋಲ್​ಗಳು ಎಐಎಡಿಎಂಕೆ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿವೆ. ಅದರ ನಡುವೆ ಆಕ್ಸಿಸ್ ಮೈ ಇಂಡಿಯಾ ದಳಪತಿ ವಿಜಯ್ ನೇತೃತ್ವದ ಟಿವಿಕೆ ಮಿರಾಕಲ್ ಸೃಷ್ಟಿಸಲಿದೆ ಎಂದು ಭವಿಷ್ಯ ನುಡಿದಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net