ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬೇಡಿ: ಸುಪ್ರೀಂಕೋರ್ಟ್ | Supreme Court

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Published on
ನವದೆಹಲಿ: ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ವಿರೋಧಿಸಿರುವ ಸುಪ್ರೀಂಕೋರ್ಟ್(Supreme Court), ಅಂತಹ ಪ್ರಕರಣಗಳಲ್ಲಿ ಅಸಾಧಾರಣ ಸಂದರ್ಭಗಳಲ್ಲಿ ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ ಜಾಮೀನು ನೀಡಬೇಡಿ ಎಂದು ವಿಚಾರಣಾ ನ್ಯಾಯಾಲಯಗಳು ಮತ್ತು ಹೈಕೋರ್ಟ್‌ಗಳಿಗೆ ಸಲಹೆ ನೀಡಿದೆ.
ಡಿಜಿಟಲ್ ಅರೆಸ್ಟ್ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಬ್ಯಾಂಕ್ ಖಾತೆ ತೆರೆಯಲು ಸಹಾಯ ಮಾಡುವುದನ್ನು ಹೊರತುಪಡಿಸಿ ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ಹೇಳುವ ಮೂಲಕ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವಾಗ ಸುಪ್ರೀಂ ಈ ಹೇಳಿಕೆಗಳನ್ನು ನೀಡಿದೆ.
ಡಿಜಿಟಲ್ ಅರೆಸ್ಟ್ ಅನ್ನೋದು ಅತ್ಯಂತ ಗಂಭೀರ ಅಪರಾಧವಾಗಿದೆ. ವಿಶೇಷವಾಗಿ ಹಿರಿಯ ನಾಗರಿಕರ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನಾಶಪಡಿಸುತ್ತದೆ ಎಂದು ಹೇಳಿದ್ದು, ಇದು ಡಕಾಯಿತಿಗೆ ಸಮ ಎಂದು ಅಭಿಪ್ರಾಯಪಟ್ಟಿದೆ. ಆದ್ದರಿಂದ ಈ ಪ್ರಕರಣಗಳನ್ನು ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net