ಸದ್ಯ ಆ ಪ್ರದೇಶದಲ್ಲಿ ಈ ರೀತಿಯ ಪಾತ್ರೆಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೊಲೀಸರು ಉತ್ತರ ಪ್ರದೇಶದ ಆ ಗ್ಯಾಂಗ್ ಅನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರೂ, ಯಾರೂ ದೂರು ನೀಡದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೇನೆಂಗಾಡಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಗ್ಗದ ಬೆಲೆಗೆ ಸಿಗುತ್ತದೆ ಎಂದು ಕಳಪೆ ವಸ್ತುಗಳನ್ನು ಖರೀದಿಸುವ ಮುನ್ನ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ, (ಏಜೆನ್ಸೀಸ್).