ಸಂಸತ್ತಿನಲ್ಲಿ ನಡೆದ ಮತದಾನದ ವಿವರಗಳ ಪ್ರಕಾರ, ಚರ್ಚೆಯ ಬಳಿಕ ನಡೆದ ಮತದಾನದಲ್ಲಿ ಒಟ್ಟು 528 ಸದಸ್ಯರು ಭಾಗವಹಿಸಿದ್ದರು. ಈ ಪೈಕಿ 298 ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 230 ಸದಸ್ಯರು ಮಸೂದೆಯನ್ನು ವಿರೋಧಿಸಿ ಮತ ಹಾಕಿದರು. ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರವಾಗಲು ಸದನದಲ್ಲಿ ಹಾಜರಿದ್ದು ಮತ ಚಲಾಯಿಸುವ ಸದಸ್ಯರ ಪೈಕಿ ಕನಿಷ್ಠ ಮೂರನೇ ಎರಡರಷ್ಟು (ಅಂದರೆ ಸುಮಾರು 326 ಮತಗಳು) ಬೆಂಬಲದ ಅಗತ್ಯವಿತ್ತು. ಆದರೆ ಸರ್ಕಾರದ ಪರವಾಗಿ 298 ಮತಗಳು ಚಲಾವಣೆಯಾದ ಕಾರಣ ಮಸೂದೆ ಕಾಯ್ದೆಯಾಗುವಲ್ಲಿ ವಿಫಲವಾಯಿತು, (ಏಜನ್ಸೀಸ್).