ಸಮಯ ವ್ಯರ್ಥ ಮಾಡಬೇಡಿ: ಜಂತರ್ ಮಂತರ್​ನ ಪೊಲೀಸ್ ಲಾಠಿಚಾರ್ಜ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ | Supreme Court

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Published on
ನವದೆಹಲಿ: ನೀಟ್ ಪರೀಕ್ಷೆ ಅಕ್ರಮ ಹೊಣೆಗಾರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಪೊಲೀಸರ ಲಾಠಿಚಾರ್ಜ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್(Supreme Court) ಬುಧವಾರ(ಜು. 22) ನಿರಾಕರಿಸಿದೆ.
ಸೋಮವಾರದ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್, ನ್ಯಾ. ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರ ಪೀಠವು, ನಮಗೆ ವೀಡಿಯೊಗಳನ್ನು ವೀಕ್ಷಿಸಲು ಸಮಯವಿಲ್ಲ ಎಂದು ತುರ್ತು ಅರ್ಜಿ ವಿಚಾರಣೆಗೆ ನಿರಾಕರಿಸಿತು.
ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದ ವೀಡಿಯೊಗಳು ನನ್ನ ಬಳಿ ಇವೆ... ನಾಳೆ ಪಟ್ಟಿ ಮಾಡಲು ಸಾಧ್ಯವಾದರೆ, ವಿದ್ಯಾರ್ಥಿಗಳು ಅಲ್ಲಿದ್ದಾರೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ಸಿಜೆಐ ನಮಗೆ ವೀಡಿಯೊಗಳಲ್ಲಿ ಆಸಕ್ತಿ ಇಲ್ಲ, ನಮಗೆ ವೀಕ್ಷಿಸಲು ಸಮಯವಿಲ್ಲ. ನಮಗೆ ವೀಡಿಯೊಗಳನ್ನು ನೋಡಲು ಇಷ್ಟವಿಲ್ಲ ಎಂದು ಹೇಳಿ ವಿನಂತಿಯನ್ನು ನಿರಾಕರಿಸಿದರು.
ವಕೀಲರು ಮತ್ತೊಮ್ಮೆ ವೀಡಿಯೊ ಸಾಕ್ಷ್ಯವನ್ನು ಉಲ್ಲೇಖಿಸಿ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ ಎಂದು ಆರೋಪಿಸಿದಾಗ, ಸಿಜೆಐ ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಾವು ಯಾವುದೇ ವೀಡಿಯೊಗಳನ್ನು ನೋಡಲು ಬಯಸುವುದಿಲ್ಲ ಎಂದರು.

ಹೈಕೋರ್ಟ್​ನಲ್ಲೂ ನಿರಾಕರಣೆ

ಮಂಗಳವಾರ(ಜು. 21) ಸಹ, ದೆಹಲಿ ಹೈಕೋರ್ಟ್, ಸಿಜೆಪಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್​ ಮಾಡಿದ ಪೊಲೀಸರ ವಿರುದ್ಧ ಸಲ್ಲಿಸಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿತು. ಇದರಲ್ಲಿ ನ್ಯಾಯಾಲಯವನ್ನು ಎಳೆಯಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠವು ವಿಚಾರಣೆಗೆ ಅರ್ಜಿ ಸಲ್ಲಿಸುವಾಗ ಅರ್ಜಿದಾರರಿಗೆ ತಿಳಿಸಿತು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net