ನವದೆಹಲಿ: ನಿನ್ನೆ (ಆ.24) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿತು. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆಗಳು ವಾಹನ ಸವಾರರು ತೀರ ಪರದಾಡುವಂತಾಯಿತು. ನಿರಂತರ ಮಳೆಯ ಹಿನ್ನೆಲೆ ಇದೀಗ ದೆಹಲಿ, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.