ಕೇಂದ್ರಾಡಳಿತ ಪ್ರದೇಶ ಲಡಾಖ್​ನಲ್ಲಿ 5.7ರಷ್ಟು ತೀವ್ರತೆಯ ಭೂಕಂಪನ; ದೆಹಲಿಯಲ್ಲೂ ಕಂಪಿಸಿದ ಭೂಮಿ | Earthquake

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ನ ಲೇಹ್​ನಲ್ಲಿ ಸೋಮವಾರ(ಜ.19) ಬೆಳಗ್ಗೆ 11.51ಕ್ಕೆ ಭಾರಿ ಭೂಕಂಪನ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.7ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಲೇಹ್​ನ ಭೂಮಿಯ ಮೇಲ್ಮೈಯಿಂದ 171 ಕಿಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ದಾಖಲಾಗಿದೆ. ತಕ್ಷಣಕ್ಕೆ ಯಾವುದೇ ಹಾನಿ ಅಥವಾ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಸ್ಥಳೀಯ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.
ಭೂಕಂಪನಶೀಲವಾಗಿ ಸಕ್ರಿಯವಾಗಿರುವ ಹಿಮಾಲಯನ್ ಪಟ್ಟಿಯ ಉದ್ದಕ್ಕೂ ಇರುವ ಲೇಹ್-ಲಡಾಖ್ ಪ್ರದೇಶವು ವಿಭಿನ್ನ ತೀವ್ರತೆಯ ಭೂಕಂಪಗಳಿಗೆ ಗುರಿಯಾಗುತ್ತದೆ. ಮುನ್ನೆಚ್ಚರಿಕೆಯಾಗಿ, ತುರ್ತು ಪ್ರತಿಕ್ರಿಯೆ ತಂಡಗಳನ್ನು ಹೆಚ್ಚಿನ ಎಚ್ಚರಿಕೆಯಲ್ಲಿ ಇರಿಸಲಾಗಿದೆ.

ದೆಹಲಿಯಲ್ಲೂ ಕಂಪಿಸಿದ ಭೂಮಿ

ಲೇಹ್​​ನಲ್ಲಿ ಕಂಪಿಸುವ ಮೊದಲು ಇಂದು ಬೆಳಿಗ್ಗೆ ದೆಹಲಿಯಲ್ಲೂ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.8 ಕಡಿಮೆ ತೀವ್ರತೆ ದಾಖಲಾಗಿದೆ. ಬೆಳಗ್ಗೆ 8.44ರ ಸುಮಾರಿಗೆ ಭೂಮಿ ಕಂಪಿಸಿದೆ. ಉತ್ತರ ದೆಹಲಿಯ ಭೂಮಿಯ 5 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡು ಬಂದಿದೆ.
ಕಳೆದ ಕೆಲವು ವರ್ಷಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ 4ರಷ್ಟು ತೀವ್ರತೆಯ ಹಲವಾರು ಭೂಕಂಪಗಳು ಸಂಭವಿಸಿವೆ. 2022ರಲ್ಲಿ ನೆರೆಯ ರಾಜ್ಯ ಹರಿಯಾಣದಲ್ಲೂ 4.1ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿತ್ತು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net