Assam Election: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ಏರುತ್ತಿದ್ದಂತೆ, ಗೋಮಾಂಸ ಸೇವನೆಯ ವಿಷಯವು ರಾಜಕೀಯ ಸಮರದ ಕೇಂದ್ರಬಿಂದುವಾಗಿ ಮಾರ್ಪಟ್ಟಿದ್ದು, ಈ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ತಾವು ಗೋಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಪ್ರಯತ್ನಿಸುತ್ತಿಲ್ಲ, ಬದಲಾಗಿ ಅದನ್ನು ಖಾಸಗಿ ಸ್ಥಳಗಳಿಗೆ ಮಾತ್ರ ಸೀಮಿತಗೊಳಿಸಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.