ಆರೋಗ್ಯ ತಜ್ಞರ ಪ್ರಕಾರ, ಒಂದೇ ಬಾರಿಗೆ ಅತಿಯಾದ ಪ್ರಮಾಣದಲ್ಲಿ ಮೊಟ್ಟೆಗಳನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡ ಉಂಟಾಗಬಹುದು. ಇದರಿಂದ ವಾಂತಿ, ಹೊಟ್ಟೆ ಉಬ್ಬರ, ತೀವ್ರ ಅಸ್ವಸ್ಥತೆ, ಉಸಿರಾಟದ ತೊಂದರೆ ಹಾಗೂ ಕೆಲವು ಸಂದರ್ಭಗಳಲ್ಲಿ ಹೃದಯದ ಕಾರ್ಯನಿರ್ವಹಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮೊಟ್ಟೆಯ ಹಳದಿ ಭಾಗದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುತ್ತದೆ. ಆದ್ದರಿಂದ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ.