1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135C ಅಡಿಯಲ್ಲಿ ಈ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಮತದಾನಕ್ಕೂ ಮುನ್ನ 48 ಗಂಟೆಗಳ ಮೊದಲು ಯಾವುದೇ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮದ್ಯದ ಅಂಗಡಿಗಳು ಅಥವಾ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮದ್ಯ ಅಥವಾ ಯಾವುದೇ ಮಾದಕ ದ್ರವ್ಯಗಳನ್ನು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವು ಸ್ಟಾರ್ ಹೋಟೆಲ್‌ಗಳು, ಕ್ಲಬ್‌ಗಳು ಮತ್ತು ಮದ್ಯ ಪೂರೈಸಲು ಪರವಾನಗಿ ಹೊಂದಿರುವ ಎಲ್ಲಾ ಸಂಸ್ಥೆಗಳಿಗೂ ಅನ್ವಯಿಸುತ್ತದೆ. ಮರು ಮತದಾನ ನಡೆಯುವ ಸಂದರ್ಭಗಳಲ್ಲಿಯೂ ಇದೇ ರೀತಿಯ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಪಿಟಿಐ ವರದಿ ಮಾಡಿದೆ.