ಯುಪಿಯಲ್ಲಿ ಚುನಾವಣೆ ಆಯೋಗ SIR ರೂಪದಲ್ಲಿ ದೊಡ್ಡ ಹಗರಣವನ್ನೇ ಮಾಡ್ತಿದೆ; ಅಖಿಲೇಶ್ ಯಾದವ್ ಆರೋಪ | Akhilesh Yadav

ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಸಿಎಂ ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಸಿಎಂ ಅಖಿಲೇಶ್ ಯಾದವ್
Published on
ಲಖನೌ: ಭಾರತೀಯ ಚುನಾವಣೆ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದ್ದು, ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ(SIR) ರೂಪದಲ್ಲಿ ದೊಡ್ಡ ಹಗರಣವನ್ನೇ ಸೃಷ್ಟಿ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಸಿಎಂ ಅಖಿಲೇಶ್ ಯಾದವ್(Akhilesh Yadav) ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಸ್ಥಾಪಕ ದಿ. ಮುಲಾಯಂ ಸಿಂಗ್ ಯಾದವ್ ಅವರ 85ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಯುಪಿ ಅತಿದೊಡ್ಡ ರಾಜ್ಯವಾಗಿದ್ದು, ವಿಧಾನಸಭಾ ಚುನಾವಣೆಗೆ 415 ದಿನಗಳು ಉಳಿದಿವೆ. ನಮ್ಮ ಪಕ್ಷವು ಬಲಿಷ್ಠವಾಗಿದ್ದು, ವಿಜಯಶಾಲಿಯಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 50,000 ಮತಗಳನ್ನು ಅಳಿಸಲಾಗುತ್ತಿದೆ. ಯುಪಿ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂತಹ ಸಿದ್ಧತೆಗಳು ನಡೆಯುತ್ತಿವೆ. ಇದೀಗ ನಾವು SIR ನಲ್ಲಿ ಸಿಲುಕಿಕೊಂಡಿದ್ದೇವೆ. ನಾವು ಕಾಗದದ ಯುದ್ಧವನ್ನೂ ಎದುರಿಸಬೇಕಾಗುತ್ತದೆ, ನಾವು ಇದಕ್ಕೆ ಸಿದ್ಧರಿದ್ದೇವೆ. ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.
ಶೇ. 99ರಷ್ಟು ಜನರು ಎಣಿಕೆ ಫಾರ್ಮ್ ಅನ್ನು ಸ್ವೀಕರಿಸಿದ್ದಾರೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ಕಿಡಿಕಾರಿರುವ ಅವರು, ಬಿಎಲ್‌ಒಗಳು ದಲಿತ ಮತ್ತು ಮುಸ್ಲಿಂ ಜನಸಂಖ್ಯೆಯ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ. ಆಡಳಿತ ಪಕ್ಷದ ನಾಯಕರ ಸ್ಥಳಗಳಲ್ಲಿ ಕುಳಿತು ಅಲ್ಲಿಂದ ಫಾರ್ಮ್‌ಗಳನ್ನು ವಿತರಿಸುತ್ತಿದ್ದಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಉತ್ತರ ಪ್ರದೇಶದಲ್ಲಿ ಎಲ್ಲಿಯೂ ತರಬೇತಿ ಪಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net