ಧರ್ಮೇಂದ್ರ ಅವರು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 'ಶೋಲೆ', 'ಫೂಲ್ ಔರ್ ಪತ್ತರ್', 'ಚುಪ್ಕೆ ಚುಪ್ಕೆ' ಮೇರಾ ಗಾಂವ್ ಮೇರಾ ದೇಶ್ ಸೇರಿದಂತೆ ನೂರಾರು ಸೂಪರ್‌ಹಿಟ್ ಸಿನಿಮಾಗಳಲ್ಲಿ ನಟಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಆರು ದಶಕಗಳ ಕಾಲ ಸಿನಿಮಾ ರಂಗದಲ್ಲಿದ್ದ ಅವರು 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ‘ದಿಲ್ ಭಿ ತೇರಾ ಹಮ್ ಭಿ ತೇರೆ’ 1960 ರಲ್ಲಿ ಬಿಡುಗಡೆಯಾಗಿತ್ತು. ಇದು ಅವರ ಮೊದಲ ಸಿನಿಮಾ, ಇದರ ಮೂಲಕವೇ ಅವರು ಬೆಳ್ಳಿ ತೆರೆಗೆ ಕಾಲಿಟ್ಟಿದ್ದರು.