ವರದಿಗಳ ಪ್ರಕಾರ, ಮೇ 4 ರಿಂದ ಮುಚ್ಚಲ್ಪಟ್ಟಿದ್ದ ಈ ಪಕ್ಷದ ಕಚೇರಿಯನ್ನು ಭಾನುವಾರ ಬೆಳಿಗ್ಗೆ ತೆರೆದಾಗ, ಅಲ್ಲಿನ ಪೆಟ್ಟಿಗೆಯೊಂದರಲ್ಲಿ ಕಾರ್ಡ್ಗಳನ್ನು ಅಚ್ಚುಕಟ್ಟಾಗಿ ಜೋಡಿಸಿಟ್ಟಿರುವುದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯ ನಿವಾಸಿಗಳು, ಕಳೆದ ಎರಡು ವರ್ಷಗಳಿಂದ ಅಂಚೆ ಇಲಾಖೆಯ ಮೂಲಕ ಮನೆ ಮನೆಗೆ ವಿತರಣೆಯಾಗಬೇಕಿದ್ದ ಈ ಕಾರ್ಡ್ಗಳನ್ನು ಟಿಎಂಸಿ ಕಾರ್ಯಕರ್ತರು ಬಲವಂತವಾಗಿ ಕಸಿದುಕೊಂಡು ತಮ್ಮ ಬಳಿಯೇ ಇಟ್ಟುಕೊಂಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.