227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು 114 ಸ್ಥಾನಗಳು ಬೇಕು. ಬಿಜೆಪಿ 89 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಡಿಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಗೆದ್ದಿದ್ದು, ಮಹಾಯುತಿ ಮೈತ್ರಿಕೂಟ 118 ವಾರ್ಡ್ಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ನಾಲ್ಕು ದಶಕಗಳಿಂದ ಬಿಎಂಸಿಯನ್ನು ಆಳುತ್ತಿರುವ ಠಾಕ್ರೆ ಬಣವು 65 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿದೆ.